ಪುತ್ತೂರು:ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಎ.7ರಿಂದ9 ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಎ.1ರಂದು ಗೊನೆ ಮುಹೂರ್ತ ನೆರವೇರಿತು.
ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಗೊನೆ ಮುಹೂರ್ತ ನೆರವೇರಿತು. ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿ ಉಪ್ಪಳ, ಉಪಾಧ್ಯಕ್ಷ ಕೆ.ಯಂ ಬೆಳಿಯಪ್ಪ ಗೌಡ ಕೆದ್ಕಾರ್, ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ರವಿ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಗಣೇಶ್ ಭಟ್ ಮಜಲುಮಾರು, ಅರ್ಚಕ ಪ್ರಸಾದ್ ಅಡಿಗ, ಕಚೇರಿ ವ್ಯವಸ್ಥಾಪಕ ಕೃಷ್ಣಪ್ಪ ಪೂಜಾರಿ ಮಾಯಂಗಲ, ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಕುಲಾಲ್ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.