ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಎ.2ರಂದು ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ಬೆಳಿಗ್ಗೆ ಹೊರೆಕಾಣಿಕೆ ಮೆರವಣಿಗೆ ನಡೆದು ದೇವಾಲಯಕ್ಕೆ ಸಮರ್ಪಣೆ ಮಾಡಲಾಯಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯರವರು ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here