ಬಡಗನ್ನೂರು: ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಟ್ರಸ್ಟಿಯಾಗಿ ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಆಯ್ಕೆಯಾಗಿದ್ದಾರೆ.
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಅಭಿವೃದ್ಧಿ ಬಗ್ಗೆ ಜರಗಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿಯವರನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕದ್ರಿ ಮಂಜುನಾಥ ಕ್ಷೇತ್ರದ ಆಡಳಿತ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದ್ದು, ಈ ಬಗ್ಗೆ ಗೆಜ್ಜೆಗಿರಿ ಕ್ಷೇತ್ರಾಡಳಿತ ಮಂಡಳಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್, ಪ್ರಮುಖರಾದ ಶೈಲೇಂದ್ರ ವೈ ಸುವರ್ಣ, ಚಂದ್ರಶೇಖರ್ ಉಚ್ಚಿಲ್, ನವೀನ್ ಸುವರ್ಣ, ಹರೀಶ್ ಕೆ ಪೂಜಾರಿ ಮತ್ತಿತ್ತರು ಪ್ರಮುಖರು ಉಪಸ್ಥಿತರಿದ್ದರು.