ಪುತ್ತೂರು: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ, ಪುತ್ತೂರು ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ||ಬಾಬು ಜಗಜೀವನ್ ರಾಂ ಅವರ 118ನೇ ಜನ್ಮ ದಿನಾಚರಣೆ ಎ.5ರಂದು ಬೆಳಿಗ್ಗೆ 10.30ರಿಂದ ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವಗೀಸ್ ಸಂಸ್ಮರಣಾ ಮತ್ತು ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಸ.ಪ್ರ.ದ.ಕಾಲೇಜಿನ ಸುಬ್ಬಪ್ಪ ಕೈಕಂಬ ಉಪನ್ಯಾಸ ನೀಡಲಿದ್ದಾರೆ. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಮಲ ರಾಮಚಂದ್ರ, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಕೆ.ಎಸ್.ಸಂಧ್ಯಾ ಹಾಗೂ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.