ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಕಳೆದ 29 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಏ.30 ರಂದು ವಯೋನಿವೃತ್ತರಾಗುತ್ತಿರುವ ಶ್ರೀಪತಿ ಭಟ್ ಇಂದಾಜೆ ಇವರ ವಿದಾಯ ಮತ್ತು ಸನ್ಮಾನ ಸಮಾರಂಭ ಏ.5 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಸುಬೋಧ ಸಭಾಭವನದಲ್ಲಿ ನಡೆಯಲಿದೆ.
ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ಪುತ್ತೂರು ರಾಮಕೃಷ್ಣ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಎಚ್.ಶ್ರೀಧರ ರೈ, ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನಾತುಲ್ ಮೆಹ್ರಾ, ಸುಬೋಧ ಪ್ರೌಢಶಾಲಾ ನಿವೃತ್ತ ಮುಖ್ಯ ಗುರು ಪಿಲಿಂಗಲ್ಲು ಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ತಿಳಿಸಿದ್ದಾರೆ.