ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ

0

ಪುತ್ತೂರು:IISC IITಮತ್ತು NITಸಂಸ್ಥೆಗಳ ಮೂಲಕ Artificial Inteligence and Machine Learning ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ಭಾಗವಹಿಸುವ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿನ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ರೂ.1500 ಶಿಷ್ಯವೇತನ/ತರಬೇತಿ ನೀಡಲಾಗುತ್ತದೆ. ಶಿಷ್ಯವೇತನ ಪಡೆಯಲು ಎ.11 ಅಂತಿಮ ದಿನವಾಗಿರುತ್ತದೆ. ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದರ್ಬೆ ಪುತ್ತೂರು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ದೃಢೀಕರಿಸಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here