
ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಏ.2ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಸಂಜೆ ಪಜಿರೋಡಿ ಶ್ರೀ ಅಯ್ಯಪ್ಪ ಭಜನಾ ಮಂಡಳಿಯವರಿಂದ ಕುಣಿತ ಭಜನೆ, ಬಳಿಕ ಸ್ಥಳೀಯ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀ ಕೃಷ್ಣ ಕಲಾ ಕೇಂದ್ರ ವೀರಮಂಗಲ ಇವರಿಂದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ರಚನೆ, ನಿರ್ದೇಶನದಲ್ಲಿ ನೃತ್ಯರೂಪಕ – ಮಕರಜ್ಯೋತಿ ನಡೆಯಿತು. ಸಂಧ್ಯಾ ಕೃಷ್ಣ ವಿಷ್ಣುನಗರ, ಶಾಂತಿಗೋಡು ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದರು.