ನೆಲ್ಯಾಡಿ: ಇಲ್ಲಿನ ಸೂರ್ಯನಗರದಲ್ಲಿರುವ ಶ್ರೀರಾಮ ವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬವನ್ನು ಮಾ.29ರಂದು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಶುಮಂದಿರದ ಸಹಾಯಕಿ ಪುಷ್ಪಾವತಿ, ಶಿಶು ಮಂದಿರದ ಮಾತಾಜಿ ಸುಮಲತಾ ಹಾಗೂ ಶಾಲಾ ಅಡುಗೆ ಸಹಾಯಕಿ ಕುಮುದರವರು ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕವಿಟ್ಟು, ಬಾಯಿಗೆ ಸಿಹಿ ನೀಡಿ ಶುಭ ಹಾರೈಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಭಾಗೀರಥಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ರಮ್ಯಾ ಸ್ವಾಗತಿಸಿ, ಶುಭರಾಣಿ ವಂದಿಸಿದರು. ಕೋಮಲಾಂಗಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.
