ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್ನಲ್ಲಿ ಏ.5ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಬಜತ್ತೂರು, ಕೊಯಿಲ, ದಾರಂದಕುಕ್ಕು, ಸೇಡಿಯಾಪು ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ (ಇಂಡಸ್ಟ್ರಿಯಲ್) ಮತ್ತು ವಾಟರ್ ಸಪ್ಲೈ ಫೀಡರ್ನಲ್ಲಿ ಏ.5ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ, ಹಳೆನೇರಂಕಿ, ಹಿರೇಬಂಡಾಡಿ, ನೆಕ್ಕಿಲಾಡಿ, ದಾರಂದಕುಕ್ಕು, ಸೇಡಿಯಾಪು, ಕೆಮ್ಮಾಯಿ, ಕೇಪುಳು, ಬನ್ನೂರು, ಸಾಲ್ಮರ, ಸೂತ್ರಬೆಟ್ಟು, ನೆಕ್ಕರೆ, ಚಿಕ್ಕಮುಡ್ನೂರು, ವಾಟರ್ ಸಪ್ಲೈ ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.