
ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನಿಡ್ಪಳ್ಳಿ ಹಾಗೂ ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ 21 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಏ.5 ರಂದು ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8.30 ಕ್ಕೆ ಪೂಜೆ ಪ್ರಾರಂಭ, ಗಂಟೆ 10 ಕ್ಕೆ ಶ್ರೀ ಶಾಂತದುರ್ಗಾ ಮಹಿಳಾ ಭಜನಾ ಮಂಡಳಿ ನಿಡ್ಪಳ್ಳಿ ಇವರಿಂದ ಮತ್ತು ಗಂಟೆ 11 ರಿಂದ ಶ್ರೀ ಶಾಂತದುರ್ಗಾ ಭಕ್ತ ವೃಂದ ನಿಡ್ಪಳ್ಳಿ ಇವರಿಂದ ಭಜನಾ ಕಾರ್ಯಕ್ರಮ. ಮಧ್ಯಾಹ್ನ ಮಹಾ ಮಂಗಳಾರತಿ, ಗಂಟೆ 1 ಕ್ಕೆ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.