ಎ.6: ಒಡಿಯೂರು ಸಂಸ್ಥಾನದಲ್ಲಿ ಭಗವನ್ನಾಮ ಸಂಕೀರ್ತನೆಗೆ ಚಾಲನೆ

0

ಎ.12: ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾ‌ನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವ ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞದ ಅಂಗವಾಗಿ ಎ.6ರಿಂದ ಎ.12ರ ವರೆಗೆ ಅಖಂಡ ಭಗವನ್ನಾಮ ಸಂಕೀರ್ತನೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಎ.6ರಂದು ಶ್ರೀರಾಮನವಮಿಯ ಶುಭದಿನದಂದು ಸೂರ್ಯೋದಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸಿ ಅಖಂಡ ಭಗವನ್ನಾಮ ಸಂಕೀರ್ತನೆಗೆ ಚಾಲನೆ ನೀಡಲಿದ್ದಾರೆ.

ಎ.12ರಂದು ಪ್ರಾತಃಕಾಲ ಭಗವನ್ನಾಮಸಂಕೀರ್ತನೆ ಮಂಗಲ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಘಂಟೆ 9ರಿಂದ ಶ್ರೀಮದ್ರಾಮಾಯಣ ಮಹಾಯಜ್ಞ ಆರಂಭ, ನಾಗದೇವರಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ನಡೆಯಲಿದೆ.


ಬಳಿಕ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ ನಡೆಯಲಿದೆ. ಈ ಸಂದರ್ಭದಲ್ಲಿ‌ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಮಧ್ಯಾಹ್ನ ಘಂಟೆ 12ರಿಂದ ಶ್ರೀಮದ್ರಾಮಾಯಣ ಮಹಾಯಜ್ಞದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಮಹಾಸಂತರ್ಪಣೆ ನಡೆಯಲಿದೆ.ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಘಂಟೆ 7ರಿಂದ ಶ್ರೀಹನುಮದ್ವತ ಪೂಜೆ, ವಿಶೇಷ ಬೆಳ್ಳಿ ರಥೋತ್ಸವ, ಉಯ್ಯಾಲೆ ಸೇವೆ ನಡೆಯಲಿದೆ.

LEAVE A REPLY

Please enter your comment!
Please enter your name here