ಪುತ್ತೂರು: ಈ ಬಾರಿಯ ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳು ಪ್ರಗತಿಯಲ್ಲಿದೆ. ಎ.03ರಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್, ಕಾರ್ಯದರ್ಶಿ ಪಿ ಸಿ ಜಾಫರ್ (ಬಜೆಟ್) ಪ್ರಧಾನ ಕಾರ್ಯದರ್ಶಿ ಎಂ ಟಇ ವೇಜು(ವೆಚ್ಚ) ಇವರ ಜೊತೆ ಶಾಸಕರು ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಇಲಾಖೆಯ ಅಧಿಕಾರಿಗಳ ಮುತುವರ್ಜಿಯೂ ಅಗತ್ಯವಾಗಿದ್ದು ಇದಕ್ಕಾಗಿ ಆರ್ಥಿಕ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಪ್ರತ್ಯೇಕ ಪ್ರತ್ಯೇಕವಾಗಿ ಭೇಟಿಯಾಗಿ ಅವರೊಡನೆ ಚರ್ಚೆ ನಡೆಸಿದ್ದಾರೆ.
ಮೆಡಿಕಲ್ ಕಾಲೇಜು ಪ್ರಾರಂಭವಾಗುವ ಮುನ್ನ 300ಬೆಡ್ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಕಾಲೇಜು ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಇದಕ್ಕಾಗಿ 300 ಕೋಟಿ ಅನುದಾನವನ್ನು ಸರಕಾರ ಶೀಘ್ರ ಬಿಡುಗಡೆ ಮಾಡಲಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ – ಆರ್ಥಿಕ ಇಲಾಖೆಯಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ...