ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

0

ಪುತ್ತೂರು: ಡಾ.ವಾಮನ್ ರಾವ್ ಬೇಕಲ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಸಹಯೋಗದಲ್ಲಿ ಎ.3ರಂದು ಸುಳ್ಯದ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸೂರಿನಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ದ.ಕ.ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗೋವಿಂದ ಭಟ್ ಕೊಳ್ಚಪ್ಪೆ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಡಾ.ಶಾಂತಾ ಪುತ್ತೂರು, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿರಾಜ್ ಅಡೂರು, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಶಿಬಿರ ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ವಿಷಯಗಳ ತರಬೇತಿ ನೀಡಿದರು. ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದರು.


ಅಧ್ಯಕ್ಷರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬ ನಗರ ನ.ಸೀತಾರಾಮ ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಗೋವಿಂದ ಭಟ್ ಕೊಳ್ಚಪ್ಪೆ ಸಭಾಧ್ಯಕ್ಷ ತೆ ವಹಿಸಿದ್ದರು. ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಯಾನಂದ ಪೆರಾಜೆ, ಡಾ.ಶಾಂತಾ ಪುತ್ತೂರು ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಗಿರೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾ.ಸೀತಾರಾಮರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿದರು.
ಶಿಕ್ಷಕಿ ಪಾವನ ಕೆ.ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಜಯಪ್ರಸಾದ ಕಾರಿಂಜ, ಶಿಕ್ಷಕರಾದ ಅಕ್ಷಯ ನವೀನ,ಶಶಿಧರ ಸಹಕರಿಸಿದರು. ಶಿಕ್ಷಕರು ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here