ಪುತ್ತೂರು: ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ, ಬಂಟ್ವಾಳ, ಮಂಗಳೂರು ಸಮಿತಿಗಳ ಸಹಯೋಗದಲ್ಲಿ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಯಾದವ ಕ್ರೀಡಾಕೂಟ-2025 ಪಾಣಾಜೆ ಆರ್ಲಪದವು ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ ಏ. 6ರಂದು ನಡೆಯಲಿದೆ.
ಯಾದವ ಸಭಾ ಪುತ್ತೂರು ತಾಲೂಕು ಸಮಿತಿಯ ಮಾಜಿ ಅಧ್ಯಕ್ಷ ನಾಗರಾಜನ್ ತಲೆಪ್ಪಾಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ಕ್ರೀಡಾಪಟು ಲಕ್ಣ್ಮಣ ಬೊಳ್ಳಾಜೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ. ಮಣಿಯಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೆಸ್ಕಾಂ ಕಿರಿಯ ಅಭಿಯಂತರರಾದ ವನಿತಾ ಕೆ. ಯಾದವ್, ಆರ್ಲಪದವು ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಧನಂಜಯ ಯಾದವ್ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.