ಅಪ್ರಾಪ್ತೆಯ ಅತ್ಯಾಚಾರ ಆರೋಪ : ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

0

ಪುತ್ತೂರು:ಕಾಲೇಜು ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪದಲ್ಲಿ ಆಟೋ ಚಾಲಕನೋರ್ವನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ಕಾಲೇಜು ವಿಧ್ಯಾರ್ಥಿನಿಯಾಗಿದ್ದು, 2024ರ ಆಗಸ್ಟ್ ತಿಂಗಳಿನಲ್ಲಿ ಕಾಲೇಜಿಗೆ ರಜೆಯಿದ್ದುದರಿಂದ ಮನೆಯಲ್ಲಿ ಒಬ್ಬಳೇ ಇದ್ದಾಗ, ಬಾಲಕಿಗೆ ಮುಖ ಪರಿಚಯವಿರುವ ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಎಂಬಾತ, ಬಾಲಕಿಯ ಮನೆಗೆ ನೀರು ಕೇಳುವ ನೆಪದಲ್ಲಿ ಬಂದು, ಬಾಲಕಿಯ ಇಚ್ಚೆಗೆ ವಿರುದ್ಧವಾಗಿ ಬಲವಂತವಾಗಿ ಅತ್ಯಾಚಾರ ಎಸಗಿ, ಬಳಿಕ ಈ ವಿಚಾರವನ್ನು ಯಾರಲ್ಲಿಯೂ ಹೇಳದಂತೆ ಬೆದರಿಕೆ ಒಡ್ಡಿ ಹೋಗಿರುತ್ತಾನೆ.ಈ ಘಟನೆಯ ಬಳಿಕವೂ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ 7-8 ಬಾರಿ ದೈಹಿಕ ಸಂಪರ್ಕ ಮಾಡಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ಕೊನೆ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ. ಆ ಬಳಿಕ ಕೆಲ ಸಮಯದಿಂದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬಾಲಕಿಯು ಏ.5ರಂದು ಆಕೆಯ ತಾಯಿಯೊಂದಿಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಹೋದಾಗ ಆಕೆಯು ಗರ್ಭಿಣಿಯಾಗಿರುವುದು ತಿಳಿದುಬಂದಿರುತ್ತದೆ.

ಅಪ್ರಾಪ್ತಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮಂಜುನಾಥ ಕಟ್ಟತ್ತಡ್ಕ ವಿರುದ್ಧ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here