
ನಿಡ್ಪಳ್ಳಿ; ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನಿಡ್ಪಳ್ಳಿ ಹಾಗೂ ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ 21 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಏ.5 ರಂದು ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನಡೆಯಿತು.
ಬೆಳಿಗ್ಗೆ ಪೂಜೆ ಪ್ರಾರಂಭವಾದ ಮೇಲೆ ಶ್ರೀ ಶಾಂತದುರ್ಗಾ ಮಹಿಳಾ ಭಜನಾ ಮಂಡಳಿ ನಿಡ್ಪಳ್ಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.
ಪೂಜಾ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ನಿಡ್ಪಳ್ಳಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು. ಇರ್ದೆ ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ನಿಡ್ಪಳ್ಳಿ ಒಕ್ಕೂಟದ ಸದಸ್ಯರು ಸಹಕರಿಸಿದರು.