ಪುತ್ತೂರು:2 ವರ್ಷದ ಹಿಂದೆ ಕೆಮ್ಮಾಯಿ ಗೃಹೋಪಯೋಗಿ ಮಳಿಗೆಯಿಂದ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
2023ರ ಆ.24ರಂದು ಕೆಮ್ಮಾಯಿಯಲ್ಲಿನ ಎಸ್.ಎಲ್.ವಿ ಎಂಟರ್‌ಪ್ರೈಸಸ್‌ನಿಂದ ಡಿವಿಆರ್, ಲ್ಯಾಪ್‌ಟಾಪ್, ನಗದು ಸಹಿತ ಒಟ್ಟು 45 ಸಾವಿರ ರೂ.ಮೌಲ್ಯದ ಸೊತ್ತು ಕಳವಾಗಿತ್ತು.ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯಾಗಿದ್ದ ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ಸಂಜಯನಗರ ನಿವಾಸಿ ಉಬೈದ್ (32ವ) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ಅವರ ನಿರ್ದೇಶನದಂತೆ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನ ಮತ್ತು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರ ನೇತೃತ್ವದಲ್ಲಿ ಹೆಡ್‌ಕಾನ್‌ಸ್ಟೇಬಲ್ ವಸಂತ ಗೌಡ, ಪ್ರಸನ್ನ ಕುಮಾರ್, ಶ್ರೀಮಂತ, ವಿನಯಾಕ ಬಾರ್ಕಿ ಆರೋಪಿಯನ್ನು ಕೇರಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.