ಪುತ್ತೂರು : ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು, ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಮತ್ತು ಸುಳ್ಯ ಕೆ.ವಿ.ಜಿ ದಂತ ಮಹಾವಿದ್ಯಾಲಯ ವತಿಯಿಂದ 27 ನೇ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಎ.6ರಂದು ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಿತು.
ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಡಾ. ಶಿವಾನಂದ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ, ಶಿಬಿರದ ಬಗ್ಗೆ ಸಲಹೆ ಸೂಚನೆ ನೀಡಿದರು. ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಸಂಚಾಲಕ ದಯಾನಂದ ಕೆ .ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಯಿಶ್ವರಿ ಪ್ರಾರ್ಥಿಸಿದರು. ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸತ್ಯಸುಂದರ ರಾವ್ ಸ್ವಾಗತಿಸಿದರು. ಸೇವ ಸಂಯೋಜಕಿ ಪ್ರಶಾಂತಿ ವಂದಿಸಿದರು. ಹಿರಿಯರಾದ ಪದ್ಮನಾಭ ನಾಯಕ್ ಉಪಸ್ಥಿತರಿದ್ದರು. ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕ ರಘುನಾಥ ರೈ ಕಾರ್ಯಕ್ರಮ ನಿರೂಪಿಸಿದರು.