ಬಡಗನ್ನೂರು: ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢ ಶಾಲೆ ಪಟ್ಟೆ, ಹಾಗೂ ಮಾತೃ ಸಂಸ್ಥೆ: ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ಆಶ್ರಯದಲ್ಲಿ 8,9,10 ನೇ ತರಗತಿ ಮಕ್ಕಳಿಗೆ ” ಆಕಾಶಕ್ಕೆ ಏಣಿ’ ” ಬೇಸಿಗೆ ಶಿಬಿರವು ಏಪ್ರಿಲ್ 8 ರಿಂದ 10ರ ತನಕ ಪೂರ್ವಾಹ್ನ 9:30ರಿಂದ ಸಂಜೆ 3:30ರ ವರೆಗೆ ಪಟ್ಟೆ ಶಾಲಾ ಆವರಣದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಯೋಗ, ಧ್ಯಾನ, ಏರೋಬಿಕ್ಸ್, ಚಿತ್ರಕಲೆ, ಕ್ರಾಫ್ಟ್, ವೇದಗಣಿತ, ಮನರಂಜನಾ ಆಟಗಳು, ಸಂಗೀತ ಹಾಗೂ ನೃತ್ಯ ಇತ್ಯಾದಿ ವಿಷಯಗಳಿಗೆ ಪ್ರತ್ಯೇಕ ನುರಿತ ತಜ್ಞರಿಂದ ತರಬೇತಿ ನೀಡಲಾಗುವುದು. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ದ್ವಾರಕಾ ಪ್ರತಿಷ್ಠಾನ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.