ಎ.7:ಫಿಲೋಮಿನಾ ಕ್ರೀಡಾಂಗಣದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರ್-ಕಾಲೇಜು ಮಹಿಳೆಯರ ಲೆದರ್‌ಬಾಲ್ ಕ್ರಿಕೆಟ್ ಟೂರ್ನಮೆಂಟ್ ಎ.7 ರಂದು ನಡೆಯಲಿದೆ.


ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಯಿದೆ ದೇವುಸ್ ಸಮೂಹ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಮುಖ್ಯ ಅತಿಥಿಗಳಾಗಿ ಪುತ್ತೂರು ಯೂನಿಯನ್ ಕ್ರಿಕೆಟರ‍್ಸ್ ಕಾರ್ಯದರ್ಶಿ ವಿಶ್ವನಾಥ ನಾಯಕ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ|ಜೆರಾಲ್ಡ್ ಸಂತೋಷ್ ಡಿ’ಸೋಜರವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಎಲ್ಯಾಸ್ ಪಿಂಟೊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here