ಉಪ್ಪಿನಂಗಡಿ; ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎ.4ರಂದು ನಡೆಯಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಅತಿಥಿಗಳಾಗಿದ್ದ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ್ ರಾವ್ ಮಣಿಕ್ಕಳ, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಪಿ.ಎನ್.ನೆಕ್ಕರಾಜೆ, ಸದ್ಯರಾದ ಪ್ರೇಮಾ, ಭಾಗೀರಥಿ ಅವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಎಸ್‌ಡಿಎಂಸಿ ಸದಸ್ಯರಾದ ಜನಾರ್ದನ ಆಚಾರ್ಯ, ರುಕ್ಮಯ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕಿ ವಿದ್ಯಾ ಕೆ.ಸ್ವಾಗತಿಸಿ, ಶಿಕ್ಷಕಿ ಪುನಂತೇಶ್ವರಿ ವಂದಿಸಿದರು. ಶಿಕ್ಷಕಿ ಮಾಲತಿ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ಪವಿತ್ರ, ಚಿತ್ರಾವತಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಅಕ್ಷರ ದಾಸೋಹ ಸಿಬ್ಬಂದಿಗಳಾದ ಸುಶೀಲಾ, ಗೀತಾ, ಸ್ಥಳೀಯ ಅಂಗನವಾಡಿ ಸಹಾಯಕಿ ಪರಮೇಶ್ವರಿ ಸಹಕರಿಸಿದರು. ಬಳಿಕ ಅಂಗನವಾಡಿ ಪುಟಾಣಿಗಳಿಂದ, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಮಕ್ಕಳ ಪೋಷಕರು, ಹಳೆವಿದ್ಯಾರ್ಥಿಗಳು, ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಸಿಹಿ ಊಟ ನೀಡಲಾಯಿತು.