ಪುತ್ತೂರು: ಪುತ್ತೂರು ಬಿಜೆಪಿಯಿಂದ ಎ.8ರಂದು ಬೆಳಿಗ್ಗೆ ಗಂಟೆ 9ಕ್ಕೆ ಪುತ್ತೂರು ಸಾಲ್ಮರ ಕೋಟೇಚಾ ಹಾಲ್‌ನಲ್ಲಿ ಸಹಕಾರಿ ಸಮಾವೇಶ ನಡೆಯಲಿದೆ.
ಇತ್ತೀಚೆಗೆ ಸಹಕಾರಿ ಕ್ಷೇತ್ರದಲ್ಲಿ ಸಹಕಾರ ಭಾರತಿಯ ಬಿಜೆಪಿ ಬೆಂಬಲಿತರು ವಿಜೇತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಂಸದ ಕ್ಯಾ| ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ಬಿಜೆಪಿ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.