ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎ.9 ಹಾಗೂ 10 ರಂದು ‘ಅಕ್ಷಯ ವೈಭವ’ ಕಾರ್ಯಕ್ರಮ ಮೇಳೈಸಲಿದೆ.
ಎ.9ರಂದು ಬುಧವಾರ ಸಂಜೆ ಅಕ್ಷಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದ್ದು, ಪುತ್ತೂರು ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜು ವ್ಯವಸ್ಥಾಪಕ ನಿರ್ದೇಶಕರಾದ ಕಲಾವತಿ ಜಯಂತ್ರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟಿ ಕು|ಭವ್ಯ ಪೂಜಾರಿ, ಮಿಸ್ಟರ್ ಕರ್ನಾಟಕ 2024 ವಿನ್ನರ್ ಪ್ರಣೀತ್ ಸುವರ್ಣರವರು ಭಾಗವಹಿಸಲಿದ್ದಾರೆ.
ಎ.10ರಂದು ಸಂಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಜರಗಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜು ಸಂಚಾಲಕ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಜೊತೆ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜನಪ್ರಿಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಬ್ದುಲ್ ಬಶೀರ್ ವಿ.ಕೆ, ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ವಿಶೇಷ ಆಹ್ವಾನಿತರಾಗಿ ಬಹುಭಾಷಾ ಚಲನಚಿತ್ರ ನಟ ಯಶ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವನ್, ಕಾರ್ಯದರ್ಶಿ ಪೂಜಿತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.