ಪುಣಚ ಮಹಿಷಮರ್ದಿನಿ ದೇವರ ವರ್ಷಾವಧಿ ಜಾತ್ರೋತ್ಸವ- ಧ್ವಜಾರೋಹಣ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 5 ದಿನಗಳ ಕಾಲ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಂಭ್ರಮಕ್ಕೆ ಎ.7ರಂದು ಧ್ವಜಾರೋಹಣದೊಂದಿಗೆ ಚಾಲನೆ ದೊರೆಯಿತು.
ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಧ್ವಜಾರೋಹಣ, ನಿತ್ಯ ಬಲಿ ನಡೆದು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ‌ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.
ಹೊರಕಾಣಿಕೆ ಸಮರ್ಪಣೆ: ಬೆಳಿಗ್ಗೆ ಗ್ರಾಮದ ವಿವಿಧ ಕಡೆಗಳಿಂದ ಹಸಿರುವಾಣಿ ಹೊರಕಾಣಿಕೆ ಸಮರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here