ಕಡಬ: ರೆಂಜಿಲಾಡಿ ಗ್ರಾಮದ ನೂಜಿಬೈಲು ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಜಾತ್ರೆ ಎ.11ರಿಂದ 14ರ ವರೆಗೆ ನಡೆಯಲಿದ್ದು ಆ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಶನಿವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದಂತೆ ಗೊನೆ ಕಡಿಯಲಾಯಿತು. ಬಳಿಕ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯವರು, ಪರಿಚಾರಕರು, ಶ್ರೀ ಉಳ್ಳಾಲ್ತಿ ಹಿಂದೂ ಚಾರಿಟೇಬಲ್ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.