ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಎ.5ರಂದು ನಡೆಯಿತು.
ವೇದಮೂರ್ತಿ ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಸುಳ್ಯ ಅವರ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನ ನಡೆಯಿತು. ಶನೈಶ್ಚರನ ಅನುಗ್ರಹದಿಂದ ಭಕ್ತರಲ್ಲಿ ಶಾಂತಿ, ಸಮೃದ್ಧಿ ಮತ್ತು ಶಕ್ತಿಯ ಪ್ರಭಾವ ಹೆಚ್ಚಳವಾಗಲೆಂದು ಈ ವೇಳೆ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್., ಉಪಾಧ್ಯಕ್ಷರಾದ ರವಿಚಂದ್ರ ಹೊಸವಕ್ಲು, ಕಾರ್ಯದರ್ಶಿ ವಿನೋದ್ ಕುಮಾರ್, ಗೌರವ ಸಲಹೆಗಾರರಾದ ಶಿವದಾಸನ್, ದೇವಸ್ಥಾನದ ಅರ್ಚಕರಾದ ಶ್ರೀಧರ ನೂಜಿನ್ನಾಯ, ಅಶ್ವಥ್ ನಾರಾಯಣ ಹಾಗೂ ಆಡಳಿತ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
