ನೆಲ್ಯಾಡಿ: ನೆಲ್ಯಾಡಿ-ಕೊಕ್ಕಡ ರಸ್ತೆಯ ಪುತ್ಯೆ ಎಂಬಲ್ಲಿ 50 ಲಕ್ಷ ರೂ.ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಎ.6ರಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು.
2024-25ನೇ ಸಾಲಿನಲ್ಲಿ ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆಯ ಲೆಕ್ಕ ಶೀರ್ಷಿಕೆ 5054 ರಸ್ತೆ ಮತ್ತು ಸೇತುವೆಗಳ ಹೊಸ ಕಾಮಗಾರಿಗಳ ಅಪೆಂಡಿಕ್ಸ್ ಇ ಯೋಜನೆಯಡಿಯಲ್ಲಿ ಸುಳ್ಯ-ಪೈಚಾರು-ಸವಣೂರು-ನೆಲ್ಯಾಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪುತ್ಯೆ ಎಂಬಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಫಾರಸ್ಸು ಮಾಡಿದ್ದರು. ಅದರಂತೆ ಅನುದಾನ ಬಿಡುಗಡೆಗೊಂಡಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು. ಅರ್ಚಕ ಶ್ರೀಧರ ನೂಜಿನ್ನಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಅನಿಲ, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ಎಂ.ಕೆ.ಇಬ್ರಾಹಿಂ, ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಪಿಲವೂರು, ಕೌಕ್ರಾಡಿ ಗ್ರಾ.ಪಂ.ಸದಸ್ಯ ಸುಧಾಕರ ಜಿ., ತಾ.ಪಂ.ಮಾಜಿ ಸದಸ್ಯೆ ಬೇಬಿಸದಾನಂದ ಗೌಡ, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಪ್ರಮುಖರಾದ ಸುಂದರ ಗೌಡ ಅತ್ರಿಜಾಲು, ರಮೇಶ್ ಶೆಟ್ಟಿ ಬೀದಿ, ಗೀರೀಶ್ ಶೆಟ್ಟಿ ಬೀದಿ, ಸದಾನಂದ ಗೌಡ ಕುಂಡಡ್ಕ, ದಿನಕರ ಗೌಡ ಹೊಸಮನೆ, ಹರಿಪ್ರಸಾದ್ ನೆಲ್ಯಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
