
ಪುತ್ತೂರು: ವಿಶೇಷ ಶಿಕ್ಷಣ ಮತ್ತು ತರಬೇತಿಯ ಮೂಲಕ ಸಹಕಾರಿ ವಲಯವನ್ನು ಹೆಚ್ಚಿಸುವತ್ತ ಮಹತ್ವದ ಗುರಿಯನ್ನು ಇಟ್ಟುಕೊಂಡು ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ 2025 ಅನ್ನು ಅಂಗೀಕರಿಸಲಾಗಿದೆ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಹೇಳಿದರು.
ಪುತ್ತೂರು ಸಾಲ್ಮರ ಕೊಟೇಚಾ ಹಾಲ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮಂಡಲದ ಸಹಕಾರಿ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕಳೆದ ಮೂರು ವರ್ಷದ ಹಿಂದೆ ಸಹಕಾರಿ ಸಚಿವಾಲಯವನ್ನು ಮಾಡಲಾಗಿದೆ. ಪ್ರತಿಯೊಂದು ಗ್ರಾಮದಲ್ಲೂ ಸಹಕಾರಿ ಕ್ಷೇತ್ರ ಇರಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯೋಜನೆ ರೂಪಿಸಿದ್ದಾರೆ. ಮುಂದೆ ಪ್ರತಿ ಗ್ರಾಮದಲ್ಲಿನ ಸಹಕಾರಿ ಸಂಘದ ಮೂಲಕ 25 ಕ್ಕೂ ಹೆಚ್ಚು ಆರ್ಥಿಕ ಚಟುವಟಿಕೆ ನಡೆಯಲಿದೆ ಎಂದ ಅವರು ಸಹಕಾರಿ ಕ್ಷೇತ್ರದ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ದೂರದೃಷ್ಟಿತ್ವ ಮಾಡಬೇಕಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪುತ್ತೂರು ಮಂಡಲದ ಪ್ರಭಾರಿ ಸುನಿಲ್ ಆಳ್ವ , ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್ , ನಗರಸಭೆ ಅಧ್ಯಕ್ಷೆ ಲೀಲಾವತಿ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ ಬಿ , ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್ ಸಿ ನಾರಾಯಣ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸ್ವಾಗತಿಸಿ, ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಪ್ರಾಸ್ತಾವಿಕವಾಗಿ ಮಾತನಾಡಿದರು.