ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ -ಪೂರ್ಣಾತ್ಮರಾಮ್
ಪುತ್ತೂರು: ಸ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ ಎರಡನೇ ಹಂತದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಪೂರ್ಣಾತ್ಮರಾಮ್ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು. ಶಾಲಾ ಎಸ್.ಡಿ.ಎಂ.ಸಿ ಆಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಇಬ್ರಾಹಿಂ, ಹಿರಿಯ ಶಿಕ್ಷಕಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಸ್ವಾಗತಿಸಿ, ಶಿಕ್ಷಕ ಗಣೇಶ ನಾಯಕ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.
ಅಭಿನಂದನೆ: ಅಡುಗೆ ಸಿಬ್ಬಂದಿಗಳಾದ ಸ್ಟೆಲ್ಲಾ ಡಿ ಸೋಜ ಹಾಗೂ ಸೀತಾ ಮತ್ತು ಪೋಷಕರಾದ ಗುಲಾಬಿ, ಅತಿಥಿ ಶಿಕ್ಷಕಿ ಕು.ಸ್ವಾತಿ ಯವರನ್ನು ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು .