
ಕಾಣಿಯೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶ್ರೀವಿದ್ಯಾ ಎನ್ 595 ಅಂಕ ಪಡೆದುಕೊಂಡು, ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ನಾರಾಯಣ್ ಭಟ್ ಕಾಣಿಯೂರು ಮತ್ತು ಶೈಲಶ್ರೀಯವರ ಪುತ್ರಿ.