ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಔಪಚಾರಿಕವಾಗಿ ಸ್ವಾಗತಿಸುವ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಫಾ|ಡಾ| ಎಲ್ದೋ ಪುತ್ತೆನ್‌ಕಂಡತ್ತಿಲ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನು ಹೇಳಿದರು ಹಾಗೂ ಕಾಲೇಜಿನ ನೀತಿ-ನಿಯಮಾವಳಿಗಳನ್ನು ಮತ್ತು ಧ್ಯೇಯ- ದೋರಣೆಗಳನ್ನು ಕುರಿತು ತಿಳಿಸಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಉಷಾ ಎಂ ಎಲ್ ಮತ್ತು ಪ್ರಶಿಕ್ಷಣಾರ್ಥಿ ಸರಿತಾ ಮರಿತಾ ಗೋಮ್ಸ್ ಪ್ರಶಿಕ್ಷಣಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಸಂಯೋಜಕರಾದ ಉಮಾಶ್ರೀ ಪಿ. ಬಿ. ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಅಶ್ವೀತಾ ಸಿ. ಎ. ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ದೀಕ್ಷಿತಾ ಎಸ್ ಮತ್ತು ರಕ್ಷಾ ಕೆ ಎಂ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದವರು ಉಪಸ್ಥಿತರಿದ್ದರು. ತದನಂತರ ಎಲ್ಲಾ ವಿದ್ಯಾರ್ಥಿ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.