ವಿಟ್ಲ: ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ 301 ವಿದ್ಯಾರ್ಥಿಗಳು ಹಾಜರಾಗಿದ್ದು, 31 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 152 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 63 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಒಟ್ಟು 86.7% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಯಜ್ಞಶ್ರೀ 587, ವಾಣಿಜ್ಯ ವಿಭಾಗದಲ್ಲಿ ಕೀರ್ತಿ ಶೆಟ್ಟಿ ಕೆ 561 ಮತ್ತು ಕಲಾ ವಿಭಾಗದಲ್ಲಿ ತಸ್ಲೀಯ 547 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ.