ನೆಲ್ಯಾಡಿ: ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.೧೦೦ ತೇರ್ಗಡೆ ಫಲಿತಾಂಶ ಬಂದಿದೆ.
ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ೬೮ ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.೧೦೦ ಫಲಿತಾಂಶ ಲಭಿಸಿದೆ. ೧೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೫೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಐದು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗ:
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ೩೨ ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.೧೦೦ ಫಲಿತಾಂಶ ಲಭಿಸಿದೆ. ನಾಲ್ವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, ೨೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅಲೆಕ್ಸ್ ಜೋಸೆಫ್ ೫೬೭, ಸಿ.ಸಿ.ರೋಸ್ಲಿ ೫೫೨, ರಿಸ್ಟೋನ್ ರೋನಿ ೫೨೧, ಅಬಿನ್ ಜಾರ್ಜ್ ೫೧೦ ಅಂಕ ಪಡೆದುಕೊಂಡು ಡಿಸ್ಟಿಂಕ್ಷ್ನಲ್ಲಿ ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ೩೬ ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.೧೦೦ ಫಲಿತಾಂಶ ಲಭಿಸಿದೆ. ೭ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, ೨೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಫಾತಿಮತ್ ಅಫ್ನಾ ೫೭೦, ಅಲೆನ್ ಶಿಬು ೫೫೧, ಸುಹೈರಾ ಪವ್ರೀನ್ ೫೪೪, ಶರೂನ್ ವಿ ತೋಮಸ್ ೫೩೮, ವರುಣ್ ಕುಮಾರ್ ೫೩೨, ಫಾತಿಮತ್ ಅಫ್ರಾ ೫೨೭, ರಿಫದ್ ಅಹ್ಮದ್ ೫೧೪ ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.