ಪುತ್ತೂರು: 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿಯವರು ವಾಣಿಜ್ಯ ವಿಭಾಗದಲ್ಲಿ 523 ಅಂಕಗಳನ್ನು ಪಡೆದುಕೊಂಡು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ತೆಂಕಿಲ ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಉದ್ಯಮಿ ಪ್ರವೀಣ್ ಪಲ್ಲತ್ತಾರುರವರು ಪುತ್ರರಾಗಿದ್ದಾರೆ.