ಕಾಣಿಯೂರು: ಸ.ಹಿ.ಪ್ರಾ. ಶಾಲೆ ನಾಣಿಲದಲ್ಲಿ ದ್ವಿತೀಯ ಸೆಮಿಸ್ಟರ್ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏ.8ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ದಲಾರಿ ಅವರು ವಹಿಸಿದ್ದರು. ಮಾರ್ಗದರ್ಶಕರಾಗಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಲಕ್ಷ್ಮಿ ಕೆ. ಟಿ ಆಗಮಿಸಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೋಭಾ ಕಂಡಿಗ, ಉಪಸ್ಥಿತರಿದ್ದರು.ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕ ಸುನಿಲ್ ವಂದಿಸಿದರು.