ಬಡಗನ್ದೂರು: ದ.ಕ.ಜಿ.ಪಂ. ಉ.ಹಿ.ಪ್ರಾ.ಶಾಲೆ ಬಡಗನ್ನೂರು ಇಲ್ಲಿ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎಸ್. ಡಿಎಂಸಿ ಅಧ್ಯಕ್ಷರಾದ ಬಾಬುಮೂಲ್ಯ ಇವರ ಅಧ್ಯಕ್ಷತೆಯಲ್ಲಿ ಎ.8 ರಂದು ನಡೆಯಿತು
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ ಶೖೆಕ್ಷಣಿಕಾ ರೂಪು ರೇಷೆ ಹಾಗೂ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಚರ್ಚಿಸಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.