ಕಾಣಿಯೂರು: ಕಾಣಿಯೂರು ಸ. ಹಿ ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎಸ್ ಡಿ ಎಂ ಸಿಯ ಅಧ್ಯಕ್ಷ ಪರಮೇಶ್ವರ ಗೌಡ ಅನಿಲರವರ ಅಧ್ಯಕ್ಷತೆಯಲ್ಲಿ ಏ 8ರಂದು ನಡೆಯಿತು.
ಕಾರ್ಯಕ್ರಮದ ಮಾರ್ಗದರ್ಶಕ ಅಧಿಕಾರಿಯಾಗಿ ಕಾಣಿಯೂರು ಸರಕಾರಿ ಪ್ರೌಢ ಶಾಲಾ ಶಿಕ್ಷಕಿ ಮೇಬಲ್ ರೋಡ್ರಿಗಸ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೊಡಿ, ಸ್ಥಾಯಿ ಸಮಿತಿ ಅಧ್ಯಕ್ಷ ತಾರನಾಥ ಇಡ್ಯಡ್ಕ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋಧ ನೇರೊಳ್ತಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಬಾಲಕೃಷ್ಣ ಕೆ ಸ್ವಾಗತಿಸಿ, ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವೀಕ್ಷಿತಾ ವಂದಿಸಿದರು.