ಪುತ್ತೂರು: ಹಿರಿಯ ಹೃದಯ ಶಸ್ತ್ರಚಿಕಿತ್ಸಕ, ಪುತ್ತೂರಿನ ಬೆಳ್ಳಿಪಾಡಿ ಮನೆತನದ ಡಾ.ಬೆಳ್ಳಿಪಾಡಿ ಶ್ಯಾಮಪ್ರಸಾದ್ ಶೆಟ್ಟಿ ಅವರು ಮೈಸೂರಿನಲ್ಲಿ ನೂತನವಾಗಿ ಆರಂಭವಾಗಿರುವ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಶನ್, ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ (ಫೇಮ್ )ನ ಮೆಡಿಕಲ್ ಡೈರೆಕ್ಟರ್ ಆಗಿ ನೇಮಕಗೊಂಡಿದ್ದಾರೆ.
ಈ ಹಿಂದೆ ಮೈಸೂರಿನ ಜೆಎಸ್ ಎಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ನಿರ್ದೇಶಕ ಹಾಗೂ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಪುತ್ತೂರಿನ ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ, ಸಂತ ಫಿಲೋಮಿನಾ ಹೈಸ್ಕೂಲ್ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ.
ಅವಿಭಜಿತ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಿ.ಕೆ.ಎನ್. ಮಹಾಬಲ ಶೆಟ್ಟಿ ಅವರ ಪುತ್ರ.