ಅಧ್ಯಕ್ಷರಾಗಿ ರಾಕೇಶ್ ರೈ ಪರ್ಪುಂಜ, ಕಾರ್ಯದರ್ಶಿಯಾಗಿ ಮೊಹಮ್ಮದ್ ಕೆ.ಎಚ್, ಕೋಶಾಧಿಕಾರಿ ಫಾರೂಕ್ ಪಿ.ಎಸ್ ಆಯ್ಕೆ
ಪುತ್ತೂರು: ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಪರ್ಪುಂಜ ಇದರ ನೂತನ ಅಧ್ಯಕ್ಷರಾಗಿ ರಾಕೇಶ್ ರೈ ಪರ್ಪುಂಜ ಹಾಗೂ ಕಾರ್ಯದರ್ಶಿಯಾಗಿ ಮೊಹಮ್ಮದ್ ಕೆ.ಎಚ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹಮೀದ್ ಗಡಾಜೆ, ಕೋಶಾಧಿಕಾರಿಯಾಗಿ ಫಾರೂಕ್ ಪಿ.ಎಸ್, ಜೊತೆ ಕಾರ್ಯದರ್ಶಿಯಾಗಿ ಜಗದೀಶ್ ಹಾಗೂ ಮಹಾಬಲ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ರೈ ಪರ್ಪುಂಜ ಹಾಗೂ ಮಹಮ್ಮದ್ ಜೈಜನತಾ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.