ಉಪ್ಪಿನಂಗಡಿ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯವರು ಕಚೇರಿಗೆ ಬಾರದೇ ಎರಡು ತಿಂಗಳು ಕಳೆದಿದ್ದು, ಇದರಿಂದ ಗ್ರಾಮಸ್ಥರು ತಮ್ಮ ಅಗತ್ಯ ಕೆಲಸಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪೆರ್ನೆ ಗ್ರಾ.ಪಂ. ಸದಸ್ಯ ಪ್ರಕಾಶ್ ನಾಯಕ್, ಇಲ್ಲಿನ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ಬಾರದೇ ಎರಡು ತಿಂಗಳು ಕಳೆದಿವೆ. ಇವರನ್ನು ಪ್ಲಾಟಿಂಗ್ ಕೆಲಸ ಕಾರ್ಯಗಳಿಗಾಗಿ ಮೇಲಾಧಿಕಾರಿಗಳು ತಮ್ಮ ಕಚೇರಿಗೆ ಕರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ದಿನಕ್ಕೆ ಒಂದು ಗಂಟೆಯಾದರೂ ಗ್ರಾಮ ಆಡಳಿತಾಧಿಕಾರಿ ತಮ್ಮ ಗ್ರಾಮದಲ್ಲಿ ಜನರಿಗೆ ಲಭಿಸುವಂತಿರಬೇಕು. ಈ ರೀತಿಯಾದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.