ನಿಡ್ಪಳ್ಳಿ; ಗ್ರಾಮದ ಮುಡಿಪುನಡ್ಕ ಶ್ರೀಕೃಷ್ಣ ಭಜನಾ ಮಂದಿರದ 24ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಏ.10 ರಂದು ಜರಗಲಿದೆ.
ಬೆಳಿಗ್ಗೆ ಗಣಪತಿ ಹವನ, ಗಂಟೆ 10 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ.ಗಂಟೆ 11.30ರಿಂದ ಭಗವದ್ಗೀತಾ ಪಾರಾಯಣ ತಂಡ ಸುಳ್ಯ ಬಾಳಿಲ ಇವರಿಂದ ಭಗವದ್ಗೀತಾ ಪಾರಾಯಣ. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ. ರಾತ್ರಿ ಗಂಟೆ 10.30ಕ್ಕೆ ಭಜನಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ಭಜನಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.