ನೆಲ್ಯಾಡಿ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಹಾಗೂ ಕಲಾ ವಿಭಾಗಕ್ಕೆ 92.10 ಶೇ. ತೇರ್ಗಡೆ ಫಲಿತಾಂಶ ಲಭಿಸಿದೆ.
ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 100 ವಿದ್ಯಾರ್ಥಿಗಳು ತೇರ್ಗಡೆಗೊಂಡು 97.08 ಶೇ. ಫಲಿತಾಂಶ ಲಭಿಸಿದೆ. 18 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 67 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗ ಶೇ.100:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 65 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಲಭಿಸಿದೆ. 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಧೃತಿ 565, ಫಾತಿಮತುಲ್ ಪಫಾನಾ 543, ಸುಶ್ಮಿತಾ 539, ಸ್ಪಂದನಾ 539, ಶೀಬಾ 537, ಗೌತಮಿ 536, ಸಹನಾ 532, ಸುಜನ್ಯಾ 530, ಅಸ್ಥಿಯಾಬಾನು 530, ಮುಹಮ್ಮದ್ ಮುಝಾಮಿಲ್ 530, ಶ್ರದ್ಧಾ 520, ರಕ್ಷಿತ್ 518, ಸಂಜನ್ 513, ಮೋಕ್ಷಾ 511, ಪ್ರತೀಕ್ಷಾ 511 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗ ಶೇ.92.10:
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿಗಳು ತೇರ್ಗಡೆಗೊಂಡು 92.10 ಶೇ.ಫಲಿತಾಂಶ ಬಂದಿದೆ. 3 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಗೌರವ್ ಕೆ.551, ಗೋಪಿಕಾ 535, ನೆಬಿಸತುಲ್ ತಸ್ರೀಫಾ 518 ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.