ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಎ.೭ರಂದು ಆರಂಭಗೊಂಡಿದ್ದು 5 ದಿನಗಳ ಕಾಲ ನಡೆಯಲಿದ್ದು ಜಾತ್ರೋತ್ಸವದ 4ನೇ ದಿನವಾದ ಎ.10ರಂದು ಬೆಳಗ್ಗೆ ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ವಿಟ್ಲ ಅರಮನೆಯ ಬಂಗಾರು ಅರಸರು, ಮಾಜಿ ಶಾಸಕ ಸಂಜೀವ ಮಠಂದೂರು, ಆಡಳಿತ ಸಮಿತಿ, ಭಜನಾ ಮಂಡಳಿ, ಗ್ರಾಮಸ್ಥರು, ಊರ-ಪರಊರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.