ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ – ಆರೋಪಿಗಳ ಬಂಧನ

0

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶಿಸಿ ಕಾನೂನಿಗೆ ಧಕ್ಕೆಯನ್ನುಂಟು ಮಾಡಿದ ಆರೋಪದ ಹಿನ್ನಲೆ ಇಬ್ಬರು ಯುವಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್‌ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ವಿರುದ್ದ ಏ.9 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ ನಂ: 42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಎಸ್‌ ಡಿ ಪಿ ಐ ಖಂಡನೆ:
ಪುತ್ತೂರು ತಾಲೂಕಿನ ಸಂಟ್ಯಾರ್ ನ ಇಬ್ಬರು ಬಜರಂಗದಳದ ಕಾರ್ಯಕರ್ತರು ಬಹಿರಂಗವಾಗಿ ತಲ್ವಾರ್ ಮಾರಕಾಯುಧ ಹಿಡಿದು “Time” ಎಂದು ತಮ್ಮ ಸ್ಟೇಟಸ್ ಗಳಲ್ಲಿ ಹಾಕಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಠಿಸುತ್ತಿದ್ದು, ಪೋಲಿಸ್ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ ತನ್ನ ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here