ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ 3 ದಿನಗಳ ವಿಶೇಷ ಬೇಸಿಗೆ ಶಿಬಿರ ಉದ್ಘಾಟನೆ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ ಇದರ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾಧ್ಯಕ್ಷತೆಯನ್ನು ಆಲಂಕಾರು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಶಿಬಿರಗಳು ಅವಶ್ಯಕ ಇದನ್ನು ಎಲ್ಲಾ ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕಾಗಿ ತಿಳಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಂದರ ಗೌಡ ನೋಟರಿ ವಕೀಲರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ ಕೇವಳ, ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರನಾಥ ಐತಾಳ, ಪ್ರಾಂಶುಪಾಲರಾದ ರೂಪ ಎಂ ಟಿ, ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪಲ್ಲವಿ ಕುಲಾಲ್, ದೀಪಿಕಾ, ಪ್ರೀತ ಅವರು ಪ್ರಾರ್ಥಿಸಿ ಆಡಳಿತಾಧಿಕಾರಿ ಶ್ರೀಪತಿ ರಾವ್ ಎಚ್ ರವರು ಅತಿಥಿಗಳನ್ನು ಸ್ವಾಗತಿಸಿ, ಮುಖ್ಯ ಗುರುಗಳಾದ ನವೀನ್ ರೈ ಸಂಪನ್ಮೂಲ ವ್ಯಕ್ತಿ ರವೀಂದ್ರನಾಥ ಐತಾಳ ರವರನ್ನು ಸಭೆಗೆ ಪರಿಚಯಿಸಿ, ಆಂಗ್ಲಭಾಷಾ ಶಿಕ್ಷಕ ಜನಾರ್ದನ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನಂತರ ರವೀಂದ್ರನಾಥ ಐತಾಳ ಅವರು ‘ಹಾವು ಮತ್ತು ನಾವು’ ಎಂಬ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.