ನಿಡ್ಪಳ್ಳಿ: ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯಲ್ಲಿ ಏ.10 ರಂದು ಆರಂಭವಾದ ಮೂರು ದಿನಗಳ ನವಚೇತನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏ.12 ರಂದು ಮಧ್ಯಾಹ್ನ ಗಂಟೆ 2ಕ್ಕೆ ಶಾಲೆಯಲ್ಲಿ ನಡೆಯಲಿದೆ.
ನವೋದಯ ವಿದ್ಯಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ ಅಧ್ಯಕ್ಷತೆ ವಹಿಸಲಿದ್ದಾರೆ. ನವೋದಯ ವಿದ್ಯಾ ಸಮಿತಿಯ ಕಾರ್ಯದರ್ಶಿ ಚಂದ್ರಹಾಸ ಮುರೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬೆಟ್ಟಂಪಾಡಿ ಕ್ಲಸ್ಟರ್ ಸಿ.ಅರ್.ಪಿ ಪರಮೇಶ್ವರಿ ಪ್ರಸಾದ್, ಕಾಟುಕುಕ್ಕೆ ಸುಬ್ರಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹಿಂದಿ ಶಿಕ್ಷಕ ಮನೋಹರ.ಎ, ಸುದ್ದಿ ಬಿಡುಗಡೆ ದಿನ ಪತ್ರಿಕೆಯ ವರದಿಗಾರ ಗಂಗಾಧರ ಸಿ.ಎಚ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯ ಗುರು ಪುಷ್ಪಾವತಿ ತಿಳಿಸಿದ್ದಾರೆ.