ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಶ್ರೀವಿದ್ಯಾ, 7ನೇ ಸ್ಥಾನ ಪಡೆದ ಉತ್ತಮ್ ರವರಿಗೆ ಸನ್ಮಾನ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ, ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಅಂಕಗಳನ್ನು (594) ಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಉತ್ತಮ್ ಜಿ ಅವರನ್ನು ತಂದೆ ಪದ್ಮನಾಭ ಗೌಡ ಗುಂಡಿಗದ್ದೆ ಅವರ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

ಹಾಗೆಯೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 595 ಅಂಕ ಪಡೆದುಕೊಂಡು ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ಪೈಕಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರಿನ ಶ್ರೀವಿದ್ಯಾ ಅವರನ್ನು ಪೋಷಕರಾದ ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಗುರು ನಾರಾಯಣ ಭಟ್ ಮತ್ತು ಶೈಲಾಶ್ರೀ, ಸಹೋದರಿ ಶ್ರೀದೇವಿ ಅವರ ಸಮ್ಮುಖದಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.


ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಅವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ, ಶಾಲಾ ಟ್ರಸ್ಟಿಗಳಾದ ವೃಂದಾ ಜೆ ರೈ, ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಅಕ್ಷತಾ ಡಿ. ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರುಗಳಾದ ನಾರಾಯಣ ಭಟ್, ವಿನಯ ವಿ ಶೆಟ್ಟಿ, ಸಹ ಆಡಳಿತ ಅಧಿಕಾರಿ ಹೇಮಾನಾಗೇಶ್ ರೈ ಮಾಳ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಬಂಡಾಜೆ ಮತ್ತು ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here