ಪುತ್ತೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮೂಲತಃ ಮಚ್ಚಿಮಲೆ ನಿವಾಸಿಯಾಗಿರುವ ಸುಧೀಕ್ಷಾ ಎಂಬವರು 593 ಅಂಕ ಪಡೆದು ರಾಜ್ಯದಲ್ಲಿ 7ನೇ ಸ್ಥಾನ ಹಾಗೂ ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಮೈಸೂರಿನ ಸದ್ವಿದ್ಯಾ ಸೆಮಿ ರೆಸಿಡೆನ್ಸಿಯಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸುಧೀಕ್ಷಾರವರು, ಇಂಗ್ಲಿಷ್-98, ಸಂಸ್ಕೃತ-99, ರಸಾಯನಶಾಸ್ತ್ರ-96, ಭೌತಶಾಸ್ತ್ರ, ಗಣಿತ, ಜೀವಶಾಸ್ತ್ರಗಳಲ್ಲಿ ತಲಾ 100 ಅಂಕಗಳು ಸೇರಿದಂತೆ ಒಟ್ಟು 593 ಅಂಕಗಳನ್ನು ಪಡೆದುಕೊಂಡು ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕಾಲೇಜಿನಲ್ಲಿ ಟಾಪರ್ ಆಗಿದ್ದಾರೆ.
ಮೈಸೂರಿನ ಸರಸ್ವತಿ ಪುರಂನ ವಿಜಯ ವಿಠಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದಿರುವ ಈಕೆ 2023ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿಯೂ 616(ಶೇ.89.56) ಅಂಕಗಳನ್ನು ಪಡೆದುಕೊಂಡಿದ್ದರು.
ಆರ್ಯಾಪು ಗ್ರಾಮದ ಮಚ್ಚಿಮಲೆ ನಿವಾಸಿಯಾಗಿರುವ, ಪ್ರಸ್ತುತ ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಶ್ರೇಣಿ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ ಮಚ್ಚಿಮಲೆ ಮತ್ತು ಜಾಹ್ನವಿ ಕೆ. ದಂಪತಿ ಪುತ್ರಿ.