ಬಂಟ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ವಿದ್ಯಾಭ್ಯಾಸ, ವಸತಿ ವ್ಯವಸ್ಥೆ

0

ಪುತ್ತೂರು: 2025-26ನೇ ಸಾಲಿನಲ್ಲಿ ಬಂಟ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಪಿಯುಸಿ ಉಚಿತ ಶಿಕ್ಷಣ ಮತ್ತು ವಸತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ 4 ವರ್ಷಗಳಿಂದ 200 ಕ್ಕೂ ಮಿಕ್ಕಿದ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಮುನ್ನಡೆ ಸಾಧಿಸಿದ್ದಾರೆ.

ಬಂಟ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವ ಪಿಯುಸಿ ಶಿಕ್ಷಣ ಪಡೆಯಲು ಇಚ್ಚಿಸುವ ಬಂಟ ವಿದ್ಯಾರ್ಥಿಗಳ ಆಯ್ಕೆಗಾಗಿ ಏ.27 ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿ ಪರೀಕ್ಷೆ ನಡೆಯಲಿರುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ- 9448912371 ಅಥವಾ 9945999255, 9844430362 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here