ನಾಳೆ ಶ್ರೀ ಉಳ್ಳಾಲ್ತಿ ಅಮ್ಮನವರ ನೇಮೋತ್ಸವ
ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಧ್ವಜಾರೋಹಣ ಏರುವುದರೊಂದಿಗೆ ಜಾತ್ರೆ ಆರಂಭಗೊಂಡಿತು.
ಶುಕ್ರವಾರ ಬೆಳಗ್ಗೆ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ, ಸಂಪ್ರದಾಯದಂತೆ ಜಾತ್ರೆಗೆ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಅಶ್ವಥ ಕಟ್ಟೆಯಲ್ಲಿ ಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅರ್ಚಕರು, ಕ್ಷೇತ್ರದ ಪರಿಚಾರಕರು, ಕ್ಷೇತ್ರದ ಆಡಳಿತ ಸಮಿತಿಯವರು, ಉತ್ಸವ ಸಮಿತಿಯವರು, ಶ್ರೀ ಉಳ್ಳಾಲ್ತಿ ಹಿಂದೂ ಚಾರಿಟೇಬಲ್ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು, ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದಿನಿಂದ ನೇಮೋತ್ಸವ:
ಎ. 12ರಂದು ಸಂಜೆ 6ಕ್ಕೆ ಸುಬ್ರಹ್ಮಣ್ಯ ಮಾಗಣೆ ರೆಂಜಿಲಾಡಿ ಬೀಡಿನ ಶ್ರೀ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಅವರನ್ನು ಸ್ವಾಗತಿಸುವುದು, ರಾತ್ರಿ 7ಕ್ಕೆ ಸಾಮೂಹಿಕ ರಂಗಪೂಜೆ ಮತ್ತು ಪ್ರಸಾದ ವಿತರಣೆ, 8.30ಕ್ಕೆ ಅಲ್ಲತ್ತಾಯ ಮತ್ತು ಪಂಜುರ್ಲಿ ದೈವಗಳ ಭಂಡಾರ ತೆಗೆದು ನೇಮ, 9.30ಕ್ಕೆ ಅನ್ನಸಂತರ್ಪಣೆ, ಎ.13ರಂದು ಬೆಳಿಗ್ಗೆ 9.15ಕ್ಕೆ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರ ತೆಗೆದು ನೇಮ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ ೩ಕ್ಕೆ ಧ್ವಜ ಅವರೋಹಣ, ಸಂಜೆ 6.11ಕ್ಕೆ ಗುಳಿಗ ದೈವದ ಭಂಡಾರ ತೆಗೆದು ನೇಮ, 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.